Friday, 7 January 2022

ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ; 
ಇಬ್ಬರು ಸ್ಥಳದಲ್ಲೇ ಸಾವು

ಪಂಚರ್ ಆಗಿದ್ದ ಕಾರನ್ನು ರಸ್ತೆ ಬದಿ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂರು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಮಾಡಿ ಕ್ಯಾಂಟರ್ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ (Lorry) ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ.

ಶಬರಿಮಲೆಗೆ ಹೋಗಿ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುವ ವೇಳೆ ದುರ್ಘಟನೆ ನಡೆದಿದೆ. ಧರಣೀಶ್ (22) ನಿರಂಜನ್ ಸಿಂಗ್ (52) ಮೃತ ದುರ್ಧೈವಿಗಳು. ಮೃತಪಟ್ಟರೆಲ್ಲಾ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯವರು ಎಂದು ಗುರುತಿಸಲಾಗಿದೆ.

ಪಂಚರ್ ಆಗಿದ್ದ ಕಾರನ್ನು ರಸ್ತೆ ಬದಿ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂರು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಮಾಡಿ ಕ್ಯಾಂಟರ್ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ನೈಸ್ ರಸ್ತೆಯ ಪುರವಂಕರ ಜಂಕ್ಷನ್‌ನಲ್ಲಿ ಹೊಸ ಕಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿದೆ. 10 ಹೊಸ ಹ್ಯುಂಡೈ ಕಾರುಗಳಿದ್ದ ಟ್ರಕ್ ಪಲ್ಟಿಯಾದ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಆಗಿದೆ. ಬಳಿಕ ಕ್ರೇನ್ ಸಹಾಯದಿಂದ ಪೊಲೀಸರು ಟ್ರಕ್ ಮೇಲೆತ್ತಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಸ್ಥಳದಲ್ಲಿ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ನೈಸ್ ರಸ್ತೆಯಲ್ಲಿ ಭೀಕರ ಅಪಘಾತಗಳು ಸಂಭವಿಸುವುದು ಮುಂದುವರಿದಿದೆ. ಬೆಂಗಳೂರು ಹೊರವಯದಲ್ಲಿರುವ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮೊಹಮ್ಮದ್ ಫಾದಿಲ್(25), ಅಭಿಲಾಷ್(25) ಮತ್ತು ಶಿಲ್ಪಾ(30) ಸೇರಿ ಒಟ್ಟು ನಾಲ್ವರು ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ. ಓರ್ವ ಯುವತಿಯ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಮತ್ತೊಂದು ಕ್ವಾಲಿಸ್ ಕಾರಲ್ಲಿದ್ದ ನಾಲ್ವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬನ್ನೇರುಘಟ್ಟ ಮಾರ್ಗದಿಂದ ತುಮಕೂರು ರಸ್ತೆ ಕಡೆ ಹೊರಟಿದ್ದ ವ್ಯಾಗನರ್ ಕಾರಿನಲ್ಲಿ ಇಬ್ಬರು ಪುರುಷರು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ಕು ಜನ ಪ್ರಯಾಣಿಸ್ತಿದ್ರು. ಅ ಕಾರಿಗೆ ಲಾರಿ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜು ಗುಜ್ಜಾಗಿತ್ತು. ಅ ನಾಲ್ವರು ಸ್ಥಳದಲ್ಲೇ ಉಸಿರು ಚೆಲ್ಲಿದರು. ಇದೇ ವೇಳೆ ಅ ಕಾರಿನ ಮುಂದೆ ಚಲಿಸುತ್ತಿದ್ದ ಕ್ವಾಲಿಸ್ ಗಾಡಿಯಲ್ಲೂ ಕೂಡ ನಾಲ್ವರೂ ಪ್ರಯಾಣಿಸ್ತಿದ್ದರು. ಅ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ. ಅವರೆಲ್ಲರನ್ನೂ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಸ್ವಿಫ್ಟ್​ ಕಾರಿನಲ್ಲಿದ್ದ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಅಪಘಾತವಾಗ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಲಾರಿ ಚಾಲಕನಿಗೆ ಶೋಧ ಕಾರ್ಯ ನಡೆಸಿದ್ದಾರೆ. ಮೇಲ್ನೋಟಕ್ಕೆ ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ತಿಳಿದುಬಂದಿರುವುದಾಗಿ ಕುಲದೀಪ್ ಕುಮಾರ್ ಜೈನ್, ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ, ತಿಳಿಸಿದ್ದಾರೆ.SHARE THIS

Author:

0 التعليقات: