ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳು ಡಾ.ಸೌಂದರ್ಯ (30) ಮೃತಪಟ್ಟವರಾಗಿದ್ದಾರೆ. ವಸಂತ ನಗರದಲ್ಲಿರುವ ಅವರ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ.
ಡಾ.ಸೌಂದರ್ಯ ಅವರ ಪತಿ ಡಾ. ನೀರಜ್ ಅವರು ನಗರದ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು, ಅವರು ಕರ್ತವ್ಯಕ್ಕೆ ತೆರಳಿದ್ದ ವೇಳೆ ಆತ್ಮಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಡಾ.ಸೌಂದರ್ಯ ಕೂಡ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. ಇವರು 2018ರಲ್ಲಿ ವಿವಾಹಿತ ರಾಗಿದ್ದರು.
ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ನಗರದ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
0 التعليقات: