ಸಯ್ಯದ್ ಮೋದಿ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿ: ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಿಂಧು
ಲಕ್ನೋ: ಎರಡು ಬಾರಿ ಒಲಿಂಪಿಕ್ಸ್ ಪದಕ ಜಯಿಸಿರುವ ಪಿವಿ ಸಿಂದು ಯುವ ಸಹ ಆಟಗಾರ್ತಿ ಮಾಳವಿಕಾ ಬಾನ್ಸೋಡ್ ರನ್ನು ನೇರ ಗೇಮ್ಗಳ ಅಂತರದಿಂದ ಮಣಿಸುವ ಮೂಲಕ ಸಯ್ಯದ್ ಮೋದಿ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಆದಿತ್ಯವಾರ ಕೇವಲ 35 ನಿಮಿಷಗಳಲ್ಲಿ ಅಂತ್ಯಗೊಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತೆ ಸಿಂಧು ಎದುರಾಳಿ ಮಾಳವಿಕಾ ರನ್ನು 21-13, 21-16 ಅಂತರದಿಂದ ಸುಲಭವಾಗಿ ಮಣಿಸಿದರು.
ಮಾಜಿ ವಿಶ್ವ ಚಾಂಪಿಯನ್ ಸಿಂಧು ಎರಡನೇ ಬಾರಿ ಸಯ್ಯದ್ ಮೋದಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. 2017ರಲ್ಲಿ ಮೊದಲ ಬಾರಿ ಪ್ರಶಸ್ತಿಯನ್ನು ಜಯಿಸಿದ್ದರು.
0 التعليقات: