Tuesday, 18 January 2022

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಮೃತ್ಯು ಪ್ರಕರಣ; ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಸಿಎಂ ಬೊಮ್ಮಾಯಿ

 

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಮೃತ್ಯು ಪ್ರಕರಣ; ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು  ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.


SHARE THIS

Author:

0 التعليقات: