Monday, 3 January 2022

ಹೈದರಾಬಾದ್ ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್ ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಕೊರೋನಾ ನಿಯಂತ್ರಣ ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ

ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆಯೇ ಸರಿ ಎಂಬುದಾಗಿ ಕಿಡಿಕಾರಿದ್ದಾರೆ.

ಸಂಜಯ್ ಅವರು ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸಿಯೇ ಕಾರ್ಯಕರ್ತರೊಂದಿಗೆ ಪ್ರತಿಭಪಟನೆ ನಡೆಸಿದ್ದು, ಹೀಗಿದ್ದೂ ಅವರ ಮೇಲೆ ಲಾಠಿ ಚಾರ್ಜ್ ಮಾಡಿ ಆನಂತ್ರ, ಪೊಲೀಸರು ಬಂಧಿಸಿದ್ದು ಮಾತ್ರ ಸರಿಯಲ್ಲ. ಇದು ಖಂಡನೀಯ ಎಂದಿದ್ದಾರೆ.SHARE THIS

Author:

0 التعليقات: