Friday, 18 February 2022

ದ.ಕ. ಜಿಲ್ಲೆಯ ಶಾಲಾ-ಕಾಲೇಜು ಸುತ್ತಮುತ್ತ ಫೆ.26ರವರೆಗೆ ನಿಷೇಧಾಜ್ಞೆ ವಿಸ್ತರಣೆ

ದ.ಕ. ಜಿಲ್ಲೆಯ ಶಾಲಾ-ಕಾಲೇಜು ಸುತ್ತಮುತ್ತ ಫೆ.26ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಮಂಗಳೂರು, ಫೆ.19: ಕೇಸರಿ ಶಾಲು- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ  ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆಯನ್ನು ಫೆ.26ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ದ.ಕ. ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆ.19ರ ಸಂಜೆ 6ರಿಂದ ಫೆ.26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಹಿಂದೆ ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು. ಆದರೆ ಹಿಜಾಬ್-ಕೇಸರಿ ಶಾಲು ವಿವಾದ ಮುಕ್ತಾಯಗೊಳ್ಳದ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ವಿಸ್ತರಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಮನವಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.


 


SHARE THIS

Author:

0 التعليقات: