ವಿಧಾನಸಭೆ ಅಧಿವೇಶನ: ಮಾ.4ಕ್ಕೆ ಕಲಾಪ ಮುಂದೂಡಿದ ಸ್ಪೀಕರ್
ಬೆಂಗಳೂರು: ಸಚಿವ ಈಶ್ವರಪ್ಪಅವರನ್ನು ಮಂತ್ರಿ ಮಂಡಲದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ವಿಧಾನಸಭೆ ಅಧಿವೇಶನ ಆರಂಭವಾಗಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಧರಣಿ ನಡಸಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಿದ್ದಾರೆ.
ಸದನದಲ್ಲಿ ಈಶ್ವರಪ್ಪ ವಿರುದ್ಧ ಭಿತ್ತಿ ಪತ್ರ ಹಿಡಿದು ಧರಣಿ ನಡೆಸಿದ ಕಾಂಗ್ರೆಸ್ ಸದಸ್ಯರು ಈಶ್ವರಪ್ಪರನ್ನು ಮಂತ್ರಿ ಮಂಡಲದಿಂದ ವಜಾಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ 'ಇನ್ನುಳಿದ ಮೂರು ದಿನಗಳ ಕಲಾಪವನ್ನು ವ್ಯರ್ಥ ಮಾಡುವ ಬದಲಿಗೆ ಕಲಾಪವನ್ನು ಇದೇ ಬರುವ ಮಾರ್ಚ್ 4ಕ್ಕೆ ಸೇರುವಂತೆ ಮುಂದೂಡುತ್ತೇನೆ' ಎಂದು ಹೇಳಿದರು.
0 التعليقات: