Thursday, 24 February 2022

ಎಸ್ಸೆಸ್ಸೆಫ್ ದ.ಕ ಜಿಲ್ಲಾ ವತಿಯಿಂದ ಪ್ರತಿಭಟನೆ


ಎಸ್ಸೆಸ್ಸೆಫ್ ದ.ಕ ಜಿಲ್ಲಾ ವತಿಯಿಂದ ಪ್ರತಿಭಟನೆ

ಮಂಗಳೂರು: ಕೋರ್ಟ್ ತೀರ್ಪನ್ನು ದುರ್ವ್ಯಾಖ್ಯಾನಗೊಳಿಸಿ ಶಿರವಸ್ತ್ರದ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ತಡೆಯುವ ಹುನ್ನಾರದ ವಿರುದ್ಧ ಪ್ರತಿಭಟನೆಯು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ (ವೆಸ್ಟ್ ಹಾಗೂ ಈಸ್ಟ್) ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ನವಾಝ್ ಸಖಾಫಿ ಅಡ್ಯಾರ್ ಪದವುರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಯ್ಯದ್ ಮದಕ ತಂಙಲ್ ದುಆ ನೆರವೇರಿಸಿದರು.ಎಸ್ಸೆಸ್ಸೆಫ್ ದ.ಕ ಈಸ್ಟ್ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಸ್ವಾಗತಿಸಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ಉಧ್ಘಾಟಿಸಿದರು.

ಎಸ್ಸೆಸ್ಸೆಫ್ ದ.ಕ ಈಸ್ಟ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಮುನ್ನುಡಿ ಭಾಷಣ ಮಾಡಿದರು.ವೆಸ್ಟ್ ಜಿಲ್ಲಾಧ್ಯಕ್ಷರಾದ ನವಾಝ್ ಸಖಾಫಿ ಅಡ್ಯಾರ್ ಪದವುರವರ  ಮಾತನಾಡಿ, ಸಿರಾಜುದ್ದೀನ್ ಸಖಾಫಿ ಕನ್ಯಾನ ರವರು ಮುಖ್ಯ ಪ್ರಭಾಷಣ ಮಾಡಿದರು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್

ಹಾಗೂ ಎಸ್ಸೆಸ್ಸೆಫ್ ಮಂಗಳೂರು ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಅಕೀಲ್ ಹಸನ್ ಮಾತನಾಡಿದರು.

ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ರಾಜ್ಯ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ,ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೈದರಲಿ ಕಾಟಿಪಳ್ಳ,ಕೋಶಾಧಿಕಾರಿ ಇಕ್ಬಾಲ್ ಮಧ್ಯನಡ್ಕ ಸಹಿತ ರಾಜ್ಯ ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶಿರವಸ್ತ್ರದ ಹಕ್ಕನ್ನು ಬಲವಂತವಾಗಿ ಕಳಚಲು ಅನಿವಾರ್ಯಪಡಿಸದಂತೆ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಲು ಹಾಗೂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನೌಫಲ್ ಫರೀದ್ ನಗರ ನಿರೂಪಿಸಿ,ವೆಸ್ಟ್ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಹಮೀದ್ ತಲಪಾಡಿ ಧನ್ಯವಾದ ಸಮರ್ಪಿಸಿದರು.


SHARE THIS

Author:

0 التعليقات: