Tuesday, 22 February 2022

ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನ


ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನ

ಕೊಚ್ಚಿ: ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ನಟಿ ಮೃತಪಟ್ಟಿರುವ ಸುದ್ದಿಯನ್ನು ಮಲಯಾಳಂ ಸಿನೆಮಾ ಕಲಾವಿದರ ಸಂಘದ ಕಾರ್ಯದರ್ಶಿ ಇಡವೇಲ ಬಾಬು ಧೃಡಪಡಿಸಿದ್ದಾರೆ.

74 ವರ್ಷದ ಲಲಿತಾ ಅವರು ಕೆಲವು ತಿಂಗಳುಗಳಿಂದ ಅನಾರೋಗ್ಯ ಪೀಡಿತರಾಗಿದ್ದರು.  

ರಂಗಭೂಮಿಯಿಂದ ಸಿನೆಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಲಲಿತಾ, 50 ವರ್ಷಗಳಿಂದ ಸಿನೆಮಾ ರಂಗದಲ್ಲಿ ಸಕ್ರಿಯರಾಗಿದ್ದರು. ಸುಮಾರು 500 ಕ್ಕೂ ಹೆಚ್ಚು ಸಿನೆಮಾಗಳಲ್ಲಿ ಅವರು ನಟಿಸಿದ್ದಾರೆ.


SHARE THIS

Author:

0 التعليقات: