Sunday, 6 February 2022

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ


ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ

ಕುಂದಾಪುರ: ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಇಂದು ಕೂಡಾ ತರಗತಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಕಾಲೇಜು ಆವರಣದಲ್ಲಿ ಕಲ್ಪಿಸಿದ ಪ್ರತ್ಯೇಕ ಕೊಠಡಿಯಲ್ಲಿ ಅವರು ಕುಳಿತುಕೊಂಡಿದ್ದಾರೆ.

ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿನಿಯರಿಗೆ ಕಳೆದ ನಾಲ್ಕೈದು ದಿನಗಳಿಂದ ಕಾಲೇಜಿನ ಆವರಣವನ್ನು ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ವಿದ್ಯಾರ್ಥಿನಿಯರು ಗೇಟ್ ಹೊರಗೆ ರಸ್ತೆ ಬದಿಯಲ್ಲೇ ಕೂರಬೇಕಾದ ಅನಿವಾರ್ಯತೆ ಎದುರಾಗಿತ್ತು. ಇದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಸಭೆ ಸೇರಿದ ಕಾಲೇಜು ಅಭಿವೃದ್ಧಿ ಸಮಿತಿಯು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಕಾಲೇಜಿನ ಯಾವುದಾದರೂ ಕೊಠಡಿಯಲ್ಲಿ ಕೂರಲು ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿತ್ತು. ಅದೇರೀತಿ ಇಂದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನೀಡದೆ ಪ್ರತ್ಯೇಕ ಕೊಠಡಿಯಲ್ಲಿ ಕೂರುವಂತೆ ಸೂಚಿಸಲಾಯಿತು.SHARE THIS

Author:

0 التعليقات: