Thursday, 17 February 2022

ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹೇಳಿಕೆ ವಿಚಾರ: ಸಚಿವ ಈಶ್ವರಪ್ಪ ವಿರುದ್ಧ ದೂರು


 ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹೇಳಿಕೆ ವಿಚಾರ: ಸಚಿವ ಈಶ್ವರಪ್ಪ ವಿರುದ್ಧ ದೂರು

ಬೆಂಗಳೂರು: ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಲಾಗಿದೆ.

ಗುರುವಾರ ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ದೂರು ಸಲ್ಲಿಕೆ ಮಾಡಿದ್ದು, ವಿವಾದಿತ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ದೇಶದ ಪ್ರತಿಯೊಬ್ಬ ಪ್ರಜೆಯೂ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಕ್ಕೆ ಗೌರವ ಸಲ್ಲಿಸುವುದು ಮೊದಲ ಕರ್ತವ್ಯವಾಗಿದೆ. ಇದರ ವಿರುದ್ಧ ಪಿತೂರಿ ನಡೆಸುವುದು ಅಥವಾ ಅವಮಾನ ಮಾಡುವ ಕೆಲಸಗಳನ್ನು ದೇಶದ್ರೋಹ, ರಾಷ್ಟ್ರದ್ರೋಹದ ಕೆಲಸವಾಗಿದ್ದು, ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಕ್ರಮ ಜರುಗಿಸುವಂತೆ ಅವರು ದೂರಿನಲ್ಲಿ ಕೋರಿದ್ದಾರೆ.


SHARE THIS

Author:

0 التعليقات: