Tuesday, 8 February 2022

ಕೇಸರಿ ಧ್ವಜ ಹಾರಿಸಿದ್ದ ಸರಕಾರಿ ಕಾಲೇಜಿನ ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ


ಕೇಸರಿ ಧ್ವಜ ಹಾರಿಸಿದ್ದ ಸರಕಾರಿ ಕಾಲೇಜಿನ ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ

ಶಿವಮೊಗ್ಗ: ಕೇಸರಿ ಶಾಲು ಧರಿಸಿ ಬಂದಿದ್ದ ಕೆಲವು ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದ ಇಲ್ಲಿನ ಬಾಪೂಜಿ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಎನ್ಎಸ್ ಯುಐ ಕಾರ್ಯಕರ್ತರು ಇಂದು ಬೆಳಗ್ಗೆ ರಾಷ್ಟ್ರ ಧ್ವಜಾರೋಹಣಗೈದರು.

ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಇಲ್ಲಿನ ಬಾಪೂಜಿ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಬೆಳಗ್ಗೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದ ಕೆಲವು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸರಿ ಧ್ವಜ ಹಾರಿಸಿದ್ದ ಅದೇ ಧ್ವಜಸ್ತಂಭದಲ್ಲಿ ಇಂದು ಬೆಳಗ್ಗೆ ಶಿವಮೊಗ್ಗ ಎನ್ಎಸ್ ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜವನ್ನು ಹಾರಿಸಿದರು.

ವಿದ್ಯಾರ್ಥಿಗಳು ಹಿಜಾಬ್ - ಕೇಸರಿ ವಿಚಾರವನ್ನು ಬದಿಗಿಟ್ಟು ತರಗತಿಗೆ ಹಾಜರಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಇದೇವೇಳೆ ಎನ್ಎಸ್ ಯುಐ ಕಾರ್ಯಕರ್ತರು ಮನವಿ ಮಾಡಿದರು.SHARE THIS

Author:

0 التعليقات: