Monday, 14 February 2022

ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


 ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಇಂದು 10ನೇ ತರಗತಿಯವರೆಗೆ ಶಾಲೆಗಳು ಪ್ರಾರಂಭವಾಗಿದ್ದು ಕೆಲವು ಜಿಲ್ಲೆಗಳಲ್ಲಿ ಬೇರೆ ಬೇರೆ ಪ್ರಕರಣಗಳು ವರದಿಯಾಗಿವೆ.  ನ್ಯೂನತೆಗಳನ್ನು ಸರಿಪಡಿಸುವ ಕುರಿತು ಹಾಗೂ ಎಸ್.ಒ.ಪಿಗಳ ಬಗ್ಗೆ ಸಭೆ ಕರೆದು ಚರ್ಚಿಸಲಾಗುವುದು ಎಂದರು.

ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುವ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ  ಪೆÇೀಷಕರ ಮೇಲಿದೆ. ಶಾಂತಿಯುತ ವಾತಾವರಣದಲ್ಲಿ ಅಂತಿಮ ತೀರ್ಪು ನೀಡಲು ಸಾಧ್ಯವಾಗಲಿದೆ. ಅಲ್ಲಿಯವರೆಗೆ ನಾವು ನಿಯಂತ್ರಣದಲ್ಲಿರಬೇಕು ಎಂದು ಮುಖ್ಯಮಂತ್ರಿ ಹೇಳಿದರು.


SHARE THIS

Author:

0 التعليقات: