ಪುಲ್ವಾಮಾ ದಾಳಿಗೆ ಮೂರು ವರ್ಷ: ರಕ್ತಸಿಕ್ತ ಚರಿತ್ರೆಯಲ್ಲಿ ಘೋರ ಅಧ್ಯಾಯ- 'ಪಾಪಿ'ಸ್ತಾನಕ್ಕೆ ಪ್ರತ್ಯುತ್ತರ
ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ಭಯೋತ್ಪಾದಕರು ನಡೆಸಿದ ದಾಳಿ ಭಾರತದಲ್ಲೇ ನಡೆದ ದೊಡ್ಡ ಹಾಗೂ ಭೀಕರ ಭಯೋತ್ಪಾದನಾ ದಾಳಿಗಳಲ್ಲಿ ಒಂದು. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎ) ವಾಹನಗಳ ಸಾಲಿನ (ಕಾನ್ವಾಯ್) ಮೇಲೆ ನಡೆದ ಅಂದಿನ ದಾಳಿಯಲ್ಲಿ 40 ಸಿಆರ್ಪಿಎ ಯೋಧರು ಹುತಾತ್ಮರಾದರು.ಹಲವರು ಗಾಯಗೊಂಡಿದ್ದರು.
ಜೈಷ್ ಹೊಣೆ
ದೇಶ ಕಾಯುವ ಯೋಧರನ್ನು ಬಲಿತೆಗೆದುಕೊಂಡ ಈ ಘೋರ ಹತ್ಯಾಕಾಂಡಕ್ಕೆ ತಾನೇ ಹೊಣೆಯೆಂದು ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮದ್ ಭಯೋತ್ಪಾದಕ ಸಂಟನೆ ಹೇಳಿಕೊಂಡಿತು. ಈ ದಾಳಿ ಹಿಂದೆ ಪಾಕಿಸ್ತಾನದ ಕೈವಾಡ ಇದೆಯೆಂದು ಭಾರತ ಆಪಾದಿಸಿದ್ದು ಅದನ್ನು 'ಪಾಪಿ'ಸ್ತಾನ ತಳ್ಳಿಹಾಕಿತು.
ದೇಶಕ್ಕಾಗಿ ಬಲಿದಾನ
2019 ಫೆಬ್ರವರಿ 14ರ ಆ ದುದಿರ್ನ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೋರಾ ಎಂಬಲ್ಲಿ ಈ ಘೋರ ದುಷತ್ಯ ನಡೆಯಿತು. ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್ಪಿಎ ಜವಾನರ ಕಾನ್ವಾಯ್ ಮೇಲೆ ಒಬ್ಬ ಆತ್ಮಹತ್ಯಾ ಬಾಂಬರ್ ಎರಗಿ ಭೀಕರ ಸ್ಫೋಟಕ್ಕೆ ಕಾರಣವಾಗಿದ್ದ.
* 78 ವಾಹನಗಳಲ್ಲಿ 2,547 ಯೋಧರು ಸಾಗುತ್ತಿದ್ದರು.
* ಭಾರತೀಯ ಕಾಲಮಾನ ಮುಂಜಾನೆ 3.30ಕ್ಕೆ ಜಮ್ಮುನಿಂದ ಹೊರಟ ಕಾನ್ವಾಯ್.
* ಆವಂತಿಪೋರಾ ಸಮೀಪ ಲೆಥಾಪೋರಾದಲ್ಲಿ ಮಧ್ಯಾಹ್ನ 3.15ಕ್ಕೆ ಭದ್ರತಾ ಸಿಬ್ಬಂದಿಯಿದ್ದ ಒಂದು ಬಸ್ಗೆ ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆಸಿದ ಆತ್ಮಹತ್ಯಾ ದಾಳಿಕೋರ.
* 76ನೇ ಬೆಟಾಲಿಯನ್ನ 40 ಯೋಧರು ಹುತಾತ್ಮ.
* ಸುಮಾರು 80 ಕೆಜಿ ಸ್ಫೋಟಕವನ್ನು ಬಳಸಲಾಗಿತ್ತು.
19 ಆರೋಪಿಗಳು:
ಭಾರತೀಯ ತನಿಖಾ ಸಂಸ್ಥೆಗಳು 19 ಆರೋಪಿಗಳನ್ನು ಗುರುತಿಸಿದವು. 2021ರ ಆಗಸ್ಟ್ ಹೊತ್ತಿಗೆ ಇತರ ಆರು ಜನರೊಂದಿಗೆ ಪ್ರಮುಖ ಆರೋಪಿ ಹತರಾದರು. ಏಳು ಜನರನ್ನು ಬಂಧಿಸಲಾಯಿತು. ಕಾಶ್ಮೀರ ಕಬಳಿಸುವ ಸಂಚಿನ ಅಂಗವಾಗಿ ಭಯೋತ್ಪಾದಕ ಕೃತ್ಯಗಳನ್ನು ಪಾಕಿಸ್ತಾನ ಬೆಂಬಲಿಸುತ್ತಿದ್ದು, ಪುಲ್ವಾಮಾದ ಘೋರ ದಾಳಿ ಅದರ ಭಾಗವಾಗಿದೆ.
ಭಾರತದ ಖಡಕ್ ಸಂದೇಶ
ಪುಲ್ವಾಮಾ ದಾಳಿ ನಡೆಯುತ್ತಲೇ ಪಾಕ್ನ ಉನ್ನತ ರಾಯಭಾರಿಯನ್ನು ಕರೆಸಿಕೊಂಡ ಭಾರತ ಪ್ರಬಲ ಪ್ರತಿಭಟನೆಯನ್ನು ದಾಖಲಿಸಿತು. ದಾಳಿಗೆ ಪ್ರತಿಯಾಗಿ ಕಾರ್ಯಾಚರಣೆ ನಡೆಸುವ ಪೂರ್ಣ ಸ್ವಾತಂತ್ರ್ಯವನ್ನು ಭದ್ರತಾ ಪಡೆಗಳಿಗೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಉಗ್ರರ ಅಮಾನುಷ ಕೃತ್ಯಕ್ಕೆ ಇಡೀ ದೇಶದಲ್ಲಿ ಆಕ್ರೋಶದ ಅಲೆ ಎದ್ದಿತು.
ಬಾಲಾಕೋಟ್ ದಾಳಿ ಮೂಲಕ ಎದುರೇಟು
ಉಗ್ರರ ಅಟ್ಟಹಾಸಕ್ಕೆ ಉತ್ತರ ನೀಡಲು ಭಾರತ ಸಂಕಲ್ಪ ಮಾಡಿತು. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಬಾಲಾಕೋಟ್ನಲ್ಲಿರುವ ಜೈಷ್ ಉಗ್ರಗಾಮಿಗಳ ತಾಣಗಳ ಮೇಲೆ ಪುಲ್ವಾಮಾ ದಾಳಿಯ 12 ದಿನಗಳ ನಂತರ, ಅಂದರೆ ಫೆಬ್ರವರಿ 26ರಂದು ಭಾರತೀಯ ವಾಯುಪಡೆಯ ಫೈಟರ್ ವಿಮಾನಗಳು ನುಗ್ಗಿ ಬಾಂಬ್ ದಾಳಿ ನಡೆಸಿ ಶಿಬಿರಗಳನ್ನು ಉಧ್ವಸ್ತಗೊಳಿಸಿದವು.
0 التعليقات: