ರೈತರಿಗೆ ಶುಭಸುದ್ದಿ : ಪ್ರತಿ ಎಕರೆಗೆ 250 ರೂ. ಡೀಸೆಲ್ ಸಹಾಯಧನ
ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಠ 5 ಎಕರೆಗೆ ಡಿಬಿಟಿ ಮೂಲಕ ಡೀಎಲ್ ಸಹಾಯಧನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಕೃಷಿ ಚಟುವಟಿಕೆಯಲ್ಲಿ ಯಂತ್ರೋಪಕರಣಗಳ ಬಳಕೆ ಹೆಚ್ಚುತ್ತಿದೆ. ಸಹಜವಾಗಿಯೇ ಇಂಧನ ವೆಚ್ಚ ಏರಿಕೆಯಾಗುತ್ತದೆ. ಇದನ್ನು ಭರಿಸಲು ಇದೇ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಠ 5 ಎಕರೆಗೆ ಡಿಬಿಟಿ ಮೂಲಕ ಡೀಎಲ್ ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರೈತ ಶಕ್ತಿ ಯೋಜನೆ ಘೋಷಿಸಲಾಗಿದ್ದು, ಈ ಯೋಜನೆಗಾಗಿ 500 ಕೋಟಿ ರೂ. ಕಲ್ಪಿಸಲಾಗಿದೆ. ಹಾಗಯೇ ಸಣ್ಣ, ಅತಿ ಸಣ್ಣ ರೈತರ ಅನುಕೂಲಕ್ಕಾಗಿ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ರಾಜ್ಯದ ಹೋಬಳಿಗಳಿಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
0 التعليقات: