Thursday, 17 March 2022

ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ 2.52 ಲಕ್ಷ ಹುದ್ದೆ ಖಾಲಿ: ಸಿಎಂ ಬಸವರಾಜ ಬೊಮ್ಮಾಯಿ


ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ 2.52 ಲಕ್ಷ ಹುದ್ದೆ ಖಾಲಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳ 7,68,975 ಹುದ್ದೆಗಳು ಮಂಜೂರಾಗಿದ್ದು, ಇವುಗಳಲ್ಲಿ 5,16,073 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 2,52,902 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ವಿಧಾನ ಪರಿಷತ್ತಿನಲ್ಲಿ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ಸೋಂಕು ಕಾರಣ ಖಾಲಿ ಹುದ್ದೆಗಳನ್ನು ಕಳೆದ 2 ವರ್ಷಗಳಿಂದ ನಿಯಮಿತವಾಗಿ ಭರ್ತಿ ಮಾಡದ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಇದರಿಂದ ಸರಕಾರಿ ನೌಕರರ ಮೇಲೆ ಮತ್ತಷ್ಟು ಹೊರೆ ಹೆಚ್ಚಾಗಿದೆ ಎಂದರು.

38 ಪ್ರಧಾನ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕ ಸಂಬಂಧ ಇಲಾಖಾ ಮುಖ್ಯಸ್ಥರು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕ ಆರ್ಥಿಕ ಇಲಾಖೆಯ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಅಗತ್ಯಕ್ಕೆ ತಕ್ಕಂತೆ ಹೊಸ ಹುದ್ದೆಗಳನ್ನು ಸೃಜಿಸಲು ಮತ್ತು ಖಾಲಿ ಹುದ್ದೆಗಳು ಭರ್ತಿಗೆ ಹಣಕಾಸು ಇಲಾಖೆಯ ಅನುಮತಿ ಅತ್ಯಗತ್ಯ. ಅನುಮತಿ ಪಡೆದ ನಂತರ ಲೋಕಸೇವಾ ಆಯೋಗ ಹಾಗೂ ಇತರ ಪ್ರಾಧಿಕಾರಗಳ ಮೂಲಕ ಭರ್ತಿ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ 15 ಸಾವಿರ ಸರಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದ ಅವರು, ಅಗತ್ಯ ಸೇವೆಗಳಾದ ಶಿಕ್ಷಕರು, ಪೊಲೀಸರು ಸೇರಿದಂತೆ ಇನ್ನಿತರ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.


SHARE THIS

Author:

0 التعليقات: