ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ; ಮೃತರ ಸಂಖ್ಯೆ 3ಕ್ಕೆ ಏರಿಕೆ
ಉಡುಪಿ: ಮಲ್ಲಾರು ಸಲಫಿ ಮಸೀದಿ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ಇನ್ನೋರ್ವ ಗಾಯಾಳು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ.
0 التعليقات: