Tuesday, 8 March 2022

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಕೆಲವೆಡೆ ಇಂದಿನಿಂದ 5 ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಕೆಲವೆಡೆ ಇಂದಿನಿಂದ 5 ದಿನ ಮಳೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ.

ಇಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾರ್ಚ್ 9 ರಿಂದ 12 ರವರೆಗೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಾರ್ಚ್ 10 ರಿಂದ ಮಾರ್ಚ್ 12 ರವರೆಗೆ ಕೆಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ


SHARE THIS

Author:

0 التعليقات: