Saturday, 19 March 2022

ಪಾವಗಡ ಬಸ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

 

ಪಾವಗಡ ಬಸ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ತುಮಕೂರು: ಜಿಲ್ಲೆಯ ಪಾವಗಡ ಸಮೀಪ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟಿರುವವರ ಕುಟುಭಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. 

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿದ್ದೇನೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು. 

ಇನ್ನು ವೈಯಕ್ತಿಕವಾಗಿ ಮೃತರ ಕುಟುಭಗಳಿಗೆ 1 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ಇದೇ ವೇಳೆ ಸಚಿವ ಶ್ರೀರಾಮುಲು ತಿಳಿಸಿದರು. 


SHARE THIS

Author:

0 التعليقات: