Wednesday, 9 March 2022

ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ


 ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಹಾವೇರಿ: ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಮನೆಗೆ ವಿಧಾಸನಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. 

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ  ನವೀನ್ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿರುವ ಸಿದ್ದರಾಮಯ್ಯ , ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಈ ಸಂದರ್ಭದಲ್ಲಿ ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ಇತರರಿದ್ದರು. 


SHARE THIS

Author:

0 التعليقات: